ಕೋವಿಡ್ ಕೇರ್ ಸೆಂಟರ್‌ನಲ್ಲಿ ಭೀಕರ ಅಗ್ನಿ ದುರಂತ, 7 ರೋಗಿಗಳ ದುರ್ಮರಣ..!

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯವಾಡ, ಆ.9-ಆಂಧ್ರಪ್ರದೇಶದ ವಿಜಯವಾಡದ ಕೋವಿಡ್ ಕೇರ್ ಸೆಂಟರ್‍ನಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಏಳು ರೋಗಿಗಳು ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ.

30 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಗುಜರಾತ್‍ನ ಆಹಮದಾಬಾದ್‍ನ ಕೋವಿಡ್ ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಬೆಂಕಿ ಅವಘಡ ಸಂಭವಿಸಿದ 8 ಕೊರೊನಾ ರೋಗಿಗಳು ಸಜೀವ ದಹನಗೊಂಡು ಅನೇಕುರ ಗಾಯಗೊಂಡ ದುರ್ಘಟನೆ ಹಸಿರಾಗಿರುವಾಗಲೇ ಆಂದ್ರದಲ್ಲಿ ಮತ್ತೊಂದು ದುರಂತ ಮರುಕಳಿಸಿದೆ.

ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್‍ನನ್ನು ಕೋವಿಡ್-19 ಸೋಂಕು ರೋಗಿಗಳ ಚಿಕಿತ್ಸೆ ಮತ್ತು ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಲಾಗಿತ್ತು. ಇಂದು ನಸುಕಿನಲ್ಲಿ ಬೆಂಕಿ ಕಾಣಿಸಿಕೊಂಡು ಅಗ್ನಿಯ ಕೆನ್ನಾಲಿಗೆಗೆ ಏಳು ರೋಗಿಗಳು ಬಲಿಯಾಗಿ 10 ಮಂದಿ ಗಾಯಗೊಂಡಿದ್ಧಾರೆ ಎಂದು ಕೃಷ್ಣಾ ಜಿಲ್ಲಾ ಕಲೆಕ್ಟರ್ ಎಂ.ಡಿ. ಇಮ್ತಿಯಾಜ್ ತಿಳಿಸಿದ್ದಾರೆ.

ದುರಂತದ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿನ ಜ್ವಾಲೆಗಳನ್ನು ನಂದಿಸಿದರು. ಈ ದುರಂತದಲ್ಲಿ ಮೃತಪಟ್ಟ ಏಳು ರೋಗಿಗಳ ಶವಗಳನ್ನು ಹೊರತೆಗೆಯಲಾಗಿದೆ. 30 ಜನರನ್ನು ರಕ್ಷಿಸಲಾಗಿದ್ದು, ಗಾಯಾಗಳನ್ನು ಖಾಸಗೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಯಾಗಿದ್ದ ಈ ಹೋಟೆಲ್‍ನಲ್ಲಿ 30 ರೋಗಿಗಳು ಮತ್ತು 10 ಸಿಬ್ಬಂದಿ ಇದ್ದರು. ಅಗ್ನಿ ದುರಂತದಿಂದ ರಕ್ಷಿಸಲಾಗಿ ಇತರ 20 ರೋಗಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವಿಜಯವಾಡ ಪೊಲೀಸ್ ಆಯುಕ್ತ ಟಿ. ಶ್ರೀನಿವಾಸುಲು ತಿಳಿಸಿದ್ಧಾರೆ.

ಈ ದುರಂತಕ್ಕೆ ಕಾರಣ ತಿಳಿದುಬಂದಿಲ್ಲವಾದರೂ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಉನ್ನತ ಪೊಲೀಸ್ ಆಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ದುರ್ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

# ಪ್ರಧಾನಿ ದಿಗ್ಭ್ರಮೆ :
ವಿಜಯವಾಡ ಕೋವಿಡ್ ಕೇರ್ ಸೆಂಟರ್‍ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವು-ನೋವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮತ್ತು ಆಂದ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin