ಮುಂಬೈನಲ್ಲಿ ವಾಣಿಜ್ಯ ಕಟ್ಟಡಕ್ಕೆ ಬೆಂಕಿ, ಅಪಾರ ಹಾನಿ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ಜು.11- ಜನನಿಬಿಡ ಪ್ರದೇಶವಾದ ಬೊರಿವಾಲ ಪ್ರದೇಶದ ಮೊಬೈಲ್ ಮಳಿಗೆಹಳಿರುವ ವಾಣಿಜ್ಯ ಕಟ್ಟಡಕ್ಕೆ ಇಂದು ಮುಂಜಾನೆ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ.

ಇಂದು ಮುಂಜಾನೆ 2.30ರಲ್ಲಿ 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾಟ್‍ಸಕ್ರ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದೆ. ನಂತರ ಕಟ್ಟಡಪೂರ್ವ ವ್ಯಾಪಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 77 ಮಳಿಗೆಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿದ್ದು, ಇಲ್ಲಿ ಮೊಬೈಲ್ ಫೋನ್‍ಗಳು ಮಾರಾಟ, ರಿಪೇರಿ, ಉಪಕರಣಗಳನ್ನು ಮಾರಾಟ ಮಾಡಲಾಗುತ್ತಿತ್ತು. ರಾತ್ರಿ ಕಾರಣ ಅಂಗಡಿಯಲ್ಲಿ ಯಾರು ಇರಲಿಲ್ಲ, ಪ್ರಾಣ ಹಾಣಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ.

ಸುಮಾರು 14 ಅಗ್ನಿಶಾಮಕ ವಾಹನಗಳನ್ನು ಬಳಸಿಕೊಳ್ಳಲಾಗಿದ್ದು, ಆಧುನಿಕ ಸಲಕರಣೆಯಿಂದ ಬೆಂಕಿಯನ್ನು ನಂದಿಸಲಾಗಿದೆ ಎಂದು ತಿಳಿಸಿದ್ದಾರೆ.

Facebook Comments

Sri Raghav

Admin