ಮುಂಬೈನಲ್ಲಿ ಮತ್ತೊಂದು ಅಗ್ನಿ ಅವಘಡ, 19ನೇ ಮಹಡಿಯಲ್ಲಿ ಬೆಂಕಿ..!

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ಅ.22- ಅರವತ್ತೊಂದು ಮಹಡಿಗಳ ಕಟ್ಟಡದ 19ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ ಬೆಂಕಿ ಅನಾಹುತದ ಮಾಹಿತಿ ತಿಳಿದುಬಂದಿದ್ದು, 12 ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿವೆ.

ಕಾವೇರಿ ರಸ್ತೆಯ ಒನ್ ಅವಿಜ್ಞಾ ಪಾರ್ಕ್ ಕಟ್ಟಡದ 19ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅನಾಹುತಕ್ಕೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ತಹಬದಿಗೆ ತಂದು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೂ ಯಾವುದೇ ಸಾವುನೋವಿನ ಬಗ್ಗೆ ವರದಿಯಾಗಿಲ್ಲ ಎಂದು ಅಕಾರಿಗಳು ತಿಳಿಸಿದ್ದಾರೆ.

Facebook Comments