ಪಾರ್ಲಿಮೆಂಟ್ ಅನೆಕ್ಸ್ ಕಟ್ಟಡದಲ್ಲಿ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.17- ರಾಜಧಾನಿ ದೆಹಲಿಯ ಪಾರ್ಲಿಮೆಂಟ್ ಅನೆಕ್ಸ್ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಸೆಂಟ್ರಲ್ ದೆಹಲಿಯ ಪಾರ್ಲಿಮೆಂಟ್ ಅನೆಕ್ಸ್ ಕಟ್ಟಡದ 6ನೆ ಮಹಡಿಯಲ್ಲಿ ಬೆಳಗ್ಗೆ 7.30ರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸುದ್ದಿ ತಿಳಿದ ಕೂಡಲೇ ಏಳು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ದಾವಿಸಿದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದರು.

ಶಾರ್ಟ್ ಸಕ್ರ್ಯೂಟ್‍ನಿಂದ ಈ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ದೆಹಲಿ ಫೈರ್ ಸರ್ವೀಸ್ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.

Facebook Comments

Sri Raghav

Admin