ಕೋರ್ಟ್‍ನ ರೆಕಾರ್ಡ್ ರೂಂನಲ್ಲಿ ಬೆಂಕಿ ಅವಘಡ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.18- ದೇಶದ ರಾಜಧಾನಿಯಲ್ಲಿ ಇಂದು ಬೆಳಗ್ಗೆ ಕೋರ್ಟ್‍ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರೋಹಿನಿ ಕೋರ್ಟ್‍ನ 3ನೆ ಮಹಡಿಯಲ್ಲಿರುವ ರೆಕಾರ್ಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್‍ಗರ್ಗ್, ಇಂದು ಬೆಳಗ್ಗೆ 9.41 ಸುಮಾರಿಗೆ ಕೋರ್ಟ್‍ನ ರೆಕಾರ್ಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬಂದು ಬೆಂಕಿಯನ್ನು ಆರಿಸಿದ್ದರಿಂದ ಹೆಚ್ಚಿನ ಅನಾಹುತವಾಗಿಲ್ಲ ಎಂದು ಹೇಳಿದ್ದಾರೆ.
ಬೆಂಕಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಗರ್ಗ್ ತಿಳಿಸಿದ್ದಾರೆ.

Facebook Comments