ಕೋರ್ಟ್ ಆವರಣದಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬನ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.13- ನವದೆಹಲಿಯ ದ್ವಾರಕ ಕೋರ್ಟ್ ಆವರಣದಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಉಪ್ಕಾರ್ ಎಂಬ ವ್ಯಕ್ತಿ ಮೃತಪಟ್ಟಿದ್ದು, ವಕೀಲರಾದ ಅರುಣ್‍ಶರ್ಮಾ ಅವರ 444ನೇ ಕೊಠಡಿ ಸಂಖ್ಯೆಯಲ್ಲಿ ಈ ದುರ್ಘಟನೆ ನಡೆದಿದೆ.

ಉಪ್ಕಾರ್ ಪ್ರಕರಣವೊಂದರ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರಲಾಗಿತ್ತು. ವಕೀಲರ ಕೊಠಡಿಯಲ್ಲಿ ಆತ ಕುಳಿತಿದ್ದಾಗ ರಾತ್ರಿ 9 ಗಂಟೆ ಸುಮಾರಿನಲ್ಲಿ ವಕೀಲರ ವೇಷದಲ್ಲಿದ್ದ ಆರೋಪಿಗಳು ಬಂದು ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಆತ ಮೃತಪಟ್ಟಿದ್ದಾನೆ. ನ್ಯಾಯಾಲಯದ ಆವರಣದಲ್ಲೇ ಈ ದುರ್ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

Facebook Comments