ಗ್ರೀನ್ ಜೋನ್ ಹಾವೇರಿಗೂ ಎಂಟ್ರಿ ಕೊಟ್ಟ ಕೊರೋನಾ, ಸವಣೂರಿನಲ್ಲಿ ಮೊದಲ ಕೇಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಹಾವೇರಿ, ಮೇ.4-ಇದುವರೆಗೂ ಯಾವುದೇ ಕೊರೊನಾ ಸೋಂಕು ಕಾಣಿಸಿಕೊಳ್ಳದೆ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ಹಾವೇರಿಯಲ್ಲೂ ಮೊದಲ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈನಿಂದ ಸವಣೂರಿಗೆ ಆಗಮಿಸಿದ್ದ 32 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಮುಂಬೈನಿಂದ ಮೂವರು ವ್ಯಕ್ತಿಗಳು ಸವಣೂರಿಗೆ ಆಗಮಿಸಿದ್ದರು ಅವರ ರಕ್ತ ಮತ್ತು ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿ ಬಂದಿದ್ದು, ಮೂರು ವ್ಯಕ್ತಿಳಗಳಲ್ಲಿ ಒಬ್ಬನಿಗೆ ಕೊರೊನಾ ಸೋಂಕು ತಗುಲಿರುವುದನ್ನು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಮೊದಲ ಕೊರೊನಾ ಸೋಂಕು ಕಾಣಿಸಿಕೊಂಡಿರುವುದರಿಂದ ಸೋಂಕು ಹರಡದಂತೆ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿಯ ಜತೆ ಪ್ರಾಥಮಿಕ ಸಂಪರ್ಕವಿರಿಸಿಕೊಂಡಿರುವವರನ್ನು ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗುವುದು ಒಟ್ಟಾರೆ, ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸಲಾಗುವುದು. ಜಿಲ್ಲೆಯ ಜನತೆ ಕೂಡಾ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Facebook Comments

Sri Raghav

Admin