ಶೀಘ್ರದಲ್ಲೇ ಮೀನು ಕ್ವಾರಂಟೈನ್ ಘಟಕ: ಸಿಎಂ ಬಿಎಸ್‌ವೈ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.21- ಮೀನುಗಾರಿಕೆ ಕ್ಷೇತ್ರದಲ್ಲಿ ವ್ಯಾವಹಾರಿಕ ಶಿಸ್ತು ಹಾಗೂ ರಫ್ತು ವಹಿವಾಟು ಉತ್ತೇಜಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ಬೆಂಗಳೂರು ಸಮೀಪದ ಹೆಸರುಘಟ್ಟ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ಒಂದು ಮಾದರಿ, ಸುಸಜ್ಜಿತ ಕ್ವಾರಂಟೇನ್ ಘಟಕವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಉದ್ಘಾಟಿಸಿಮಾತನಾಡಿದ ಅವರು, ರಾಜ್ಯದಲ್ಲಿ ಅಲಂಕಾರಿಕ ಮೀನು ಉತ್ಪಾದನೆ ಹಾಗೂ ಮಾರಾಟ ಚಟುವಟಿಕೆಯು ಇತ್ತೀಚೆಗೆ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಯ ಮೂಲಕ ಮೀನುಗಾರರ ಸುರಕ್ಷತೆ ಹಾಗೂ ಮೀನುಗಾರಿಕೆಯಲ್ಲಿ ಆದಾಯ ಹೆಚ್ಚಳ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದರು.

ಕರ್ನಾಟಕವು 320 ಕಿ.ಮೀ. ಉದ್ದದ ಕರಾವಳಿ ತೀರ ಹಾಗೂ 8 ಸಾವಿರ ಹೆಕ್ಟೇರುಗಳಿಗೂ ಹೆಚ್ಚಿನ ಹಿನ್ನೀರು ಪ್ರದೇಶದೊಂದಿಗೆ ದೇಶದ ಮೀನುಗಾರಿಕಾ ವಲಯಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ ಎಂದು ಪ್ರಶಂಸಿಸಿದರು. ವಿಶ್ವ ಮೀನುಗಾರಿಕೆ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಮತ್ಸ್ಯ ಸಂಪದ ಯೋಜನೆಯ ಅನುಷ್ಠಾನ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿರುವುದು ಈ ದಿನಾಚರಣೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿದೆ ಎಂದರು.

ಪ್ರಪಂಚದಾದ್ಯಂತ ಈ ದಿನಾಚರಣೆಯನ್ನು ರ್ಯಾಲಿಗಳು, ಸಾಂಸ್ಕøತಿಕ ಕಾರ್ಯಕ್ರಮಗಳು ಇತ್ಯಾದಿಗಳನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸುತ್ತಿದ್ದು ಇಂದು ನಮ್ಮ ರಾಜ್ಯವು ಇದನ್ನು ಈ ಕಾರ್ಯಾಗಾರದ ಮುಖಾಂತರ ಅತ್ಯಂತ ವಿಶಿಷ್ಟವಾಗಿ ಆಚರಿಸುತ್ತಿದೆ. ಈ ದಿನ ಮೀನುಗಾರಿಕಾ ಕ್ಷೇತ್ರದ ಇತ್ತೀಚಿನ ತಂತ್ರಜ್ಞಾನಗಳನ್ನು ಕ್ಷೇತ್ರದ ಪಾಲುದಾರರಿಗೆ ಹಾಗೂ ಅಕಾರಿಗಳಿಗೆ ತಿಳಿಸಿಕೊಡುವುದರ ಜೊತೆಗೆ ಮೀನುಗಾರಿಕೆ ಕ್ಷೇತ್ರದ ಔದ್ಯಮಿಕ ಅವಕಾಶಗಳನ್ನು ಸಹ ಪರಿಚಯಿಸಿಕೊಡಲು ಈ ಕಾರ್ಯಾಗಾರವನ್ನು ಆಯೋಜಿಸುತ್ತಿರುವುದು ನನಗೆ ಸಂತಸವನ್ನುಂಟು ಮಾಡಿದೆ.

ಕರಾವಳಿ ಯಾಂತ್ರೀಕೃತ ಮೀನುಗಾರಿಕೆ ಪೋತ್ಸಾಹಕ್ಕಾಗಿ ಪ್ರತಿ ವರ್ಷವು ಸುಮಾರು ರೂ. 135.00 ಕೋಟಿಗಳನ್ನು ಮೀನುಗಾರಿಕೆ ದೋಣಿಗಳು ಬಳಸುವ ಡೀಸೆಲ್‍ಗಾಗಿ ಸಹಾಯಧನವನ್ನಾಗಿ ನೀಡಲಾಗುತ್ತಿದೆ ಎಂದು ಹೇಳಿದರು. ಪ್ರಧಾನಮಂತ್ರಿಗಳು ಘೋಷಿಸಿರುವ ¾¾ಮತ್ಸ್ಯ ಸಂಪದ ಯೋಜನೆಯಡಿ ಪ್ರಸ್ತುತ ರಾಜ್ಯದ 137.199 ಕೋಟಿ ರೂ.ಗಳ ಕ್ರಿಯಾ ಯೋಜನೆ ಅನುಮೋದನೆಯಾಗಿದೆ. ಕೇಂದ್ರದ ಪಾಲಿನ ಮೊದಲನೇ ಕಂತಿನ ಅನುದಾನ 21.02 ಕೋಟಿ ಬಿಡುಗಡೆಯಾಗಿದೆ.

ರಾಜ್ಯದ 23 ಜಿಲ್ಲೆಗಳ ಕ್ರಿಯಾಯೋಜನೆಗಳು ಈಗ ಅನುಷ್ಠಾನದ ಹಂತದಲ್ಲಿವೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕ ರಘುಪತಿ ಭಟ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿದ್ದರು.

Facebook Comments