ಮೀನುಗಾರಿಕೆ ವಲಯಕ್ಕೆ 20050 ಕೋಟಿ ರೂ.ಯೋಜನೆಗೆ ಪ್ರಧಾನಿ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಸೆ.10-ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 20,050 ಕೋಟಿ ರೂ.ಗಳ ಯೋಜನೆಗೆ ಚಾಲನೆ ನೀಡಿದ್ದಾರೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‍ವೈ)ಯಡಿ ಮೀನುಗಾರಿಕೆ ಅಭಿವೃದ್ಧಿ ಮತ್ತು ರಫ್ತು ವಹಿವಾಟುಗಳಿಗೆ ಉತ್ತೇಜನ ನೀಡಲು ಈ ಮಹತ್ವಾಕಾಂಕ್ಷಿ ಯೋಜನೆಗೆ ಸಲಹೆ ನೀಡಲಾಗಿದೆ.

ರೈತರು, ಮೀನುಗಾರರು ಮತ್ತು ಪಶುಸಂಗೋಪನೆ-ಹೈನುಗಾರಿಕೆಯಲ್ಲಿ ತೊಡಗಿರುವವರ ಆದಾಯ ದ್ವಿಗುಣ ಮಾಡುವ ಉದ್ದೇಶವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಅಕ್ಟೋಬರ್-ನವೆಂಬರ್‍ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಬಿಹಾರದ ಮೂಲಕ ಪ್ರಧಾನಿ ಮೋದಿ ವಿಡಿಯೋ ಲಿಂಕ್ ಮುಖಾಂತರ ಈ ಯೋಜನೆಗೆ ಚಾಲನೆ ನೀಡಿದ್ದರು. ಅಲ್ಲದೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿಗಾಗಿಯೂ ಕೆಲವು ಉಪಕ್ರಮಗಳನ್ನು ಪ್ರಧಾನಿ ಪ್ರಕಟಿಸಿದ್ದಾರೆ.

Facebook Comments