ಉತ್ತರ ಪ್ರದೇಶದಲ್ಲಿ ಅಪಘಾತ : ಕರ್ನಾಟಕದ ಒಬ್ಬರು ಸೇರಿ ಐವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ನೋಯ್ಡಾ, ಮೇ 12- ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸಪ್ರೆಸ್ ವೇನಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ನಾಲ್ವರು ಮತ್ತು ಕರ್ನಾಟಕದ ಒಬ್ಬರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಿನ ಜಾವ 5 ಗಂಟೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರಿದ್ದ ಮಹೀಂದ್ರಾ ಬೊಲೆರೊದಲ್ಲಿ ಆಗ್ರಾದಿಂದ ನೋಯ್ಡಾ ಕಡೆಗೆ ಹೋಗುತ್ತಿತ್ತು. ಜೆವಾರ್ ಟೋಲ್ ಪ್ಲಾಜಾ ಬಳಿ ಕಾರು ಹಿಂಬದಿಯಿಂದ ಡಂಪರ್ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್‍ರು ತಿಳಿಸಿದ್ದಾರೆ.

ಡಂಪರ್ ಟ್ರಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಗೌತಮ್ ಬುದ್ಧ ನಗರ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಕಚೇರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಎಂದು ತಿಳಿಸಿದೆ.

Facebook Comments