ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 395 ಕೋಟಿ ರೂ. ನೆರೆಪರಿಹಾರ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮುಂಗಡವಾಗಿ 395 ಕೋಟಿ ಹಣ ಬಿಡುಗಡೆ ಮಾಡಿದೆ.

ಕೇಂದ್ರ ಹಣಕಾಸು ಇಲಾಖೆಯ ರಾಷ್ಟ್ರೀಯ ವಿಪತ್ತು ನಿರ್ವಾಹಣಾ ನಿಧಿಯಡಿ ಮೊದಲ ಕಂತಿನಲ್ಲಿ ರಾಜ್ಯಕ್ಕೆ 395.50 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಇದೀಗ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, ಎಸ್‌ಡಿಆರ್‌ಎಫ್‌ ಫಂಡ್ 395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡುಗಡೆ ಮಾಡಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಇತ್ತೀಚಗೆ ವಿಡಿಯೋ ಕಾನ್ಫರೆನ್ ಮೂಲಕ ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ತುರ್ತಾಗಿ 4000 ಕೋಟಿ ರೂ. ಮುಂಗಡ ಹಣ ನೀಡುವಂತೆ ಮನವಿ ಮಾಡಿದ್ದರು. ನಾಲ್ಕು ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದರು.

ರಾಜ್ಯದಲ್ಲಿ ಇತ್ತೀಚೆಗೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಅಶ್ಲೇಷ ಮಳೆ ಸುರಿದ ಮಹಾಮಳೆಗೆ ಭಾರೀ ಪ್ರಮಾಣದ ಆಸ್ತಿ – ಪಾಸ್ತಿ ನಷ್ಟ ಉಂಟಾಗಿತ್ತು.

Facebook Comments

Sri Raghav

Admin