ಅಕ್ರಮವಾಗಿ ಸಾಗಿಸುತ್ತಿದ್ದ, 23 ಟನ್ ತೂಕದ ಪಡಿತರ ಅಕ್ಕಿ ಹಾಗೂ ಲಾರಿ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಜಮಖಂಡಿ,ನ.11- ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಹಾಗೂ 23 ಟನ್ ತೂಕದ ಅಕ್ಕಿ ಮೂಟೆಗಳನ್ನು ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಹೊರವಲಯದ ವಿಜಯಪುರ ರಸ್ತೆಯಲ್ಲಿ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಚಾಲಕ, ಕ್ಲಿನರ್ ಸೇರಿದಂತೆ 5 ಜನರ ಮೇಲೆ ದೂರು ದಾಖಲಾಗಿದೆ.

3.44 ಲಕ್ಷ ರೂ. ಬೆಲೆಬಾಳುವ ಅಕ್ಕಿಯನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆದಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಆಹಾರ ನಿರೀಕ್ಷಕ ಎನ್.ಎಸ್. ದೇಸಾಯಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ವಿತರಿಸುತ್ತಿದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ನಗರದ ಕೆಲವರು ಬಡವರಿಗೆ ಹಣದ ಆಮಿಶ ಒಡ್ಡಿ ಕಡಿಮೆ ದರದಲ್ಲಿ ಅಕ್ಕಿಯನ್ನು ಕರೀದಿಸಿ ಹತ್ತಾರು ಟನ್‍ಗಳಷ್ಟು ಅಕ್ಕಿಯನ್ನು ಸಂಗ್ರಹಿಸಿ ನೆರೆ ರಾಜ್ಯಗಳಲ್ಲಿ ಮಾರಿಕೊಳ್ಳುವುದರ ಮೂಲಕ ಅಧಿಕಾರಿಗಳ ಭಯವಿಲ್ಲದೆ ರಾಜಾರೋಶವಾಗಿ ವ್ಯಾಪಾರ ವಹಿವಾಟು ನಡೆಸುತಿದ್ದಾರೆ ಎನ್ನಲಾಗಿದೆ.

Facebook Comments