ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಸಚಿವ ಕೆ.ಗೋಪಾಲಯ್ಯ ಭೇಟಿ, ಪರಿಶೀಲನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು. ಮೇ 26 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ವಿವಿಧ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ಇಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಗೋಪಾಲಯ್ಯ ಅವರು ದಿಢೀರ್ ಭೇಟಿ, ಪಡಿತರ ವಿತರಣೆಯನ್ನು ಪರಿಶೀಲಿಸಿದರು.

ಸೋಂಪುರ ಹೋಬಳಿಯ ಹೊನ್ನೇನಹಳ್ಳಿ, ಬಿಲ್ಲಿನಕೋಟೆ ಹಾಗೂ ಶಿವಗಂಗೆ ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ಸಚಿವರು ಸಮರ್ಪಕ ಪಡಿತರ ವಿತರಣೆ ಜೊತೆಗೆ ವಲಸೆ ಬಂದಿರುವ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ ಸಹ ಅವರ ಆಧಾರ್ ಕಾರ್ಡ್ ನ ವಿವರ ಪಡೆದು ಪಡಿತರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರು ವಿತರಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಂದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ದೂರು ಹಿನ್ನಲೆ, ಭೇಟಿ ನೀಡಲಾಗುತ್ತಿದ್ದು, ತೂಕ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಬಡವರಿಗೆ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ನೆರವಾಗಬೇಕು.

ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಗೊಳಗಾಗದೆ ಸಂಬಂಧಪಟ್ಟವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದ ಕಟ್ಟೆಕಡೆಯ ವ್ಯಕ್ತಿಯ ಹಸಿವು ನಿಗಿಸಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಆರ್ಹ ವ್ಯಕ್ತ್ತಿಗಳಿಗೆ ಪಡಿತರ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುತ್ತಿದ್ದು, ಪ್ರತಿಯೊಬ್ಬರಿಗೂ 2 ಕೆಜಿ ಕಡಲೆಕಾಳು ಹಾಗೂ ರಾಗಿ ವಿತರಣೆ ಮಾಡುವ ಚಿಂತನೆ ಸರ್ಕಾರ ಹೊಂದಿದ್ದು, ಜೂನ್ ತಿಂಗಳಿಂದ ನೂತನ ಯೋಜನೆ ಜಾರಿಯಾಗಲಿದೆ ಎಂದು ಸಚಿವರು ಹೇಳಿದರು.

ನಂತರ ಶಿವಗಂಗೆಯ ದೇವಸ್ಥಾನಕ್ಕೆ ಪ್ರಯಾಣಿಸಿದ ಸಚಿವರು, ಕೋವಿಡ್-19 ಹಿನ್ನಲೆ, ದೇವಸ್ಥಾನದೊಳಗೆ ತೆರಳದೇ, ಬಾಗಿಲಿನಲ್ಲೇ ದೇವರಿಗೆ ಕರ್ಪೂರ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಾದ ಸುಬ್ರಹ್ಮಣ್ಯ, ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಶ್ರೀನಿವಾಸಯ್ಯ ಹಾಗೂ ಇತರರು ಉಪಸ್ಥಿತರಿದ್ದರು.

Facebook Comments

Sri Raghav

Admin