ಅರಣ್ಯ ರಕ್ಷಕ ಹುದ್ದೆಗಳಿಗೆ ನೇಮಕಾತಿ, ಮಾ.16ರಿಂದ ಅರ್ಜಿ ಸಲ್ಲಿಕೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 16-03-2020 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 15-04-2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದ್ದಿದು, ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇನ್ನು ಅರ್ಜಿ ಸಲ್ಲಿಸಿದ ನಂತರ ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100ರೂ+ಸೇವಾ ಶುಲ್ಕ 20 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 25 ರೂ + ಸೇವಾ ಶುಲ್ಕ 20 ರೂ. ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್‌ಸಿದ್ಧಪಡಿಸಿ, ಹುದ್ದೆಗಳಿಗೆ ವೃತ್ತವಾರು 1:20 ಅನುಪಾತದಲ್ಲಿ ದೇಹದಾರ್ಢ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯ ಸಮರ್ಥತೆ, ಲಿಖಿತ ಪರೀಕ್ಷೆಗೆ ಹಾಜರಾಗಲು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ಈ ಎಲ್ಲಾ ಪರೀಕ್ಷೆಗಳಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬೇಕು ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ವೆಬ್‌ಸೈಟ್‌ https://kfdrecruitment.in/ ಗೆ ಭೇಟಿ ನೀಡಿ, ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಗೆ ಭೇಟಿ ನೀಡಿ

Facebook Comments