ಈ ವರ್ಷವೂ ರೈತರಿಗೆ 13 ಸಾವಿರ ಕೋಟಿ ರೂ. ಸಾಲ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಏ.18- ರೈತರಿಗೆ ಕಳೆದ ವರ್ಷ 13 ಸಾವಿರ ಕೋಟಿ ರೂಪಾಯಿ ಸಾಲವನ್ನು ವಿತರಿಸಲಾಗಿತ್ತು. ಈ ವರ್ಷವೂ ಅಷ್ಟೇ ಪ್ರಮಾಣದ ಸಾಲವನ್ನು ನೀಡಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಸಾಲ ನೀಡಲು ಸರ್ಕಾರದಿಂದ ಯಾವುದೇ ಅಡೆತಡೆಗಳು ಇರುವುದಿಲ್ಲ. ಈಗಾಗಲೇ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆಗಳು ಎಂದಿನಂತೆ ನಡೆಯಲಿವೆ ಎಂದು ಸಚಿವರು ತಿಳಿಸಿದರು.

ರೈತರ ಮುಂಗಾರು ಹಂಗಾಮಿಗೆ ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಲು ಹೊಸದಾಗಿ ಸಹಕಾರ ಬ್ಯಾಂಕುಗಳು ಹಾಗೂ ವ್ಯವಸಾಯ ಸೇವಾ ಸಹಕಾರ ಸೊಸೈಟಿಗಳಿಂದ ಸಾಲ ನೀಡಲು ಸರ್ಕಾರದಿಂದ ಸೂಚನೆ ನೀಡಲಾಗಿದ್ದು, ಈ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದ ನಡುವೆಯೂ ರೈತರಿಗೆ ಸಾಲ ನೀಡಲು ಸರ್ಕಾರ ಸಿದ್ದವಿದೆ. ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲಿದೆ ಎಂದರು.ಮದ್ಯ ಅಂಗಡಿಗಳನ್ನು ತೆರೆದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಅಡ್ಡಿಯಾಗುತ್ತದೆ.

ಈ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮುಗಿಯುವವರೆಗೂ ಮದ್ಯದಂಗಡಿಗಳನ್ನು ತೆರೆಯಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.  ಕೊರೊನಾ ನಿಯಂತ್ರಣಕ್ಕೆ ಲಾಕ್‍ಡೌನ್ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಸರ್ಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

Facebook Comments

Sri Raghav

Admin