ಆಂಧ್ರ ಪ್ರದೇಶದ ಮಾಜಿ ಸ್ಪೀಕರ್‌ ಆತ್ಮಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಹೈದರಾಬಾದ್, ಸೆ.16- ಆಂಧ್ರಪ್ರದೇಶದ ಮಾಜಿ ಸ್ಪೀಕರ್ ಕೊಡಲಾ ಶಿವಪ್ರಸಾದ್‍ರಾವ್ ಇಂದು ಬೆಳಗ್ಗೆ ಹೈದರಾಬಾದ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರಿಗೆ 72 ವರ್ಷ ವಯಸ್ಸಾಗಿತ್ತು.
ತೆಲಗುದೇಶಂ ಪಕ್ಷದ ಹಿರಿಯ ನಾಯಕರಾಗಿದ್ದ ರಾವ್ ಕೆಲಕಾಲದಿಂದ ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಅವರು ತಮ್ಮ ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ.

ತೆಲಂಗಾಣ ರಾಜ್ಯ ಸೃಷ್ಟಿಗಾಗಿ ಆಂಧ್ರಪ್ರದೇಶವನ್ನು ವಿಭಜಿಸಿದ ನಂತರ 2014ರಲ್ಲಿ ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ನರಸರಾವ್‍ಪೇಟೆಯಿಂದ ಇವರು ಆರು ಭಾರಿ ಶಾಸಕರಾಗಿದ್ದರು. ಅಲ್ಲದೆ ಗೃಹ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Facebook Comments