ಮಹಾರಾಷ್ಟ್ರ ಮಾಜಿ ಸಿಎಂ ಶಿವಾಜಿರಾವ್ ಪಾಟೀಲ್ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಪುಣೆ, ಆ.5-ಕಾಂಗ್ರೆಸ್ ಧುರೀಣ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಳಂಗೇಕರ್ (89) ಇಂದು ಬೆಳಗ್ಗೆ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.

ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಶಿವಾಜಿರಾವ್ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತಾದರೂ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಂಡು ಡಿಸ್ಜಾರ್ಜ್ ಆಗಿದ್ದರು.

ವಯೋಸಹಜ ಅನಾರೋಗ್ಯದಿಂದ ಅವರು ಕೆಲವು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Facebook Comments

Sri Raghav

Admin