“ನನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ”

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜು.30- ಸಚಿವ ಸಂಪುಟಕ್ಕೆ ನನ್ನನ್ನು ಸೇರಿಸುವುದು , ಬಿಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ನೂತನ ಸಂಪುಟದಲ್ಲಿ ನಾವಿರಬೇಕೋ ಬೇಡವೋ ಎಂಬುದು ನಾನು ತೆಗೆದುಕೊಳ್ಳುವ ನಿರ್ಧಾರವಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಒಂದು ವ್ಯವಸ್ಥೆ ಇದೆ. ಅದರಂತೆ ಮುಖ್ಯಮಂತ್ರಿ , ರಾಜ್ಯಾಧ್ಯಕ್ಷರು ಮತ್ತು ಕೇಂದ್ರ ನಾಯಕರು ತೀರ್ಮಾನ ತೆಗೆದು ಕೊಳ್ಳುತ್ತಾರೆ. ಅವರ ನಿರ್ಧಾರಕ್ಕೆ ನಾನು ಬದ್ಧ ಎಂದು ಸ್ಪಷ್ಟಪಡಿಸಿದರು.

ಜಗದೀಶ್ ಶೆಟ್ಟರ್ ಹಿರಿಯರಿದ್ದಾರೆ. ತಮ್ಮ ಜ್ಯೂನಿಯರ್ ಕೆಳಗೆ ಸಂಪುಟ ದಲ್ಲಿ ಇರುವುದಿಲ್ಲ ಎಂದು ನಿರ್ಧಾರ ಮಾಡಿದ್ದಾರೆ. ಇದಕ್ಕೂ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನುವ ಆಡಿಯೋಗೂ ಸಂಬಂಧವಿಲ್ಲ ಎಂದು ತಿಳಿಸಿದರು.

ನನ್ನ ಪರವಾಗಿ ಸ್ವಾಮೀಜಿಗಳು, ಸ್ನೇಹಿತರು ಮಾತನಾಡುತ್ತಾರೆ. ನಾನು ಸಚಿವನಾಗಬೇಕು, ಡಿಸಿಎಂ, ಸಿಎಂ ಆಗಬೇಕೆಂದು ಅಪೇಕ್ಷಿಸು ತ್ತಾರೆ. ನಾನೂ ರಾಜಕಾರಣಿ ನನಗೂ ನಿರೀಕ್ಷೆ ಇರುತ್ತದೆ. ಆದರೆ ಕೇಂದ್ರದ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಪುನರುಚ್ಚರಿಸಿದರು.

Facebook Comments