ಒಂದು ವಾರದಲ್ಲಿ ಹೊಸ ಸಚಿವ ಸಂಪುಟ ರಚನೆ : ಆರ್.ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.28- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆ ಒಂದು ವಾರದಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಇಂದು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ನಾಯಕರನ್ನು ಭೇಟಿ ಮಾಡಲಿದ್ದಾರೆ. ದೆಹಲಿಯಿಂದ ಮರಳಿದ ನಂತರ ಸಂಪುಟ ರಚನೆ ಪ್ರಕ್ರಿಯೆ ಆರಂಭವಾಗಲಿದೆ.

ಹಿರಿಯರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ವಿಚಾರ ಪ್ರಸ್ತಾಪವಾಗಿಲ್ಲ. ಬಿಜೆಪಿಯಲ್ಲಿ ಈ ರೀತಿಯ ಯಾವುದೇ ನಿಯಮಗಳಿಲ್ಲ. ಹಿರಿತನವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

Facebook Comments