ಬಿಜೆಪಿ ಸೇರುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ : ವಿಜಯಶಂಕರ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಅ.26- ಮತ್ತೆ ಬಿಜೆಪಿಗೆ ಸೇರಬೇಕೋ ಬೇಡವೋ ಎಂಬುದರ ಬಗ್ಗೆ ಮುಂದಿನ ವಾರದೊಳಗೆ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವ ವಿಜಯಶಂಕರ್ ತಿಳಿಸಿದ್ದಾರೆ.
ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನನಗೆ ಬಿಜೆಪಿಯಿಂದ ಆಹ್ವಾನ ಬಂದಿದ್ದು ನಿಜ. ಆ ಪಕ್ಷಕ್ಕೆ ಸೇರಬೇಕೋ ಬೇಡವೋ ಎಂಬುದನ್ನು ಕ್ಷೇತ್ರದ ಜನತೆಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ಉಪಚುನಾವಣೆಯಲ್ಲಿ ಹುಣಸೂರು ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿಜೆಪಿಗೆ ಸೇರುತ್ತಿದ್ದೀರಾ ಎಂಬ ಬಗ್ಗೆ ಪ್ರತಿಕ್ರಿಯಿಸಿ, ಒಂದು ರಾಷ್ಟ್ರೀಯ ಪಕ್ಷಕ್ಕೆ ಸೇರುವ ಮುನ್ನ ಯಾವುದೆ ಷರತ್ತುವಿಧಿಸಿ ಸೇರುವುದಿಲ್ಲ ಎಂದರು.

ಈಗಾಗಲೇ ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಬಿಜೆಪಿಯಿಂದ ಆಹ್ವಾನ ಬಂದಿರುವ ಬಗ್ಗೆ ಈ ಹಿಂದೆಯೇ ತಿಳಿಸಿದ್ದೆ ಎಂದು ಪತ್ರಕರ್ತರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

 

Facebook Comments