ಉತ್ತರ ಪ್ರದೇಶದ ಮಾಜಿ ಸಚಿವ ಕೊರೊನಾಗೆ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬಲಿಯಾ, ಜು.16- ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಘೋರಾ ರಾಮ್ ಅವರು ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ.

ಲಕ್ನೋದಲ್ಲಿರುವ ಕಿಂಗ್ಸ್‍ ಜಾರ್ಜ್ ವೈದ್ಯಕೀಯ ಕಾಲೀಜ್‍ನಲ್ಲಿ ದಾಖಲಾಗಿದ್ದ ರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊವೀಡ್‍ಗೆ ಬಲಿಯಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕಫ ಮತ್ತು ಉಸಿರಾಟದ ತೊಂದರೆಯಿಂದ ಮಂಗಳವಾರ ಆಸ್ಪತೆಗೆ ದಾಖಲಾಗಿದ್ದ ರಾಮ್ ಅವರಿಗೆ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಕಾಣಿಸಿಕೊಂಡಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin