ಬೆಳಗಾವಿಗೆ ಬಂದಿಳಿದ ಸಿಎಂಗೆ ಪ್ರತಿಭಟನೆ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ,ಆ.25- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕೆಂದು ಆಗ್ರಹಿಸಿ ಸಾಂಬ್ರಾ ವಿಮಾನ ನಿಲ್ದಾಣದ ಹೊರಗೆ, ಬೆಳಗಾವಿ-ಬಾಗಲಕೋಟ ಹೆದ್ದಾರಿ ಮೇಲೆ ರೈತರು ಇಂದು ಪ್ರತಿಭಟನೆ ನಡೆಸಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲೆಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿ ಇತರ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಯಾವುದೇ ಕಾರಣಕ್ಕೂ ಸರ್ಕಾರ ಈ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಬಾರದು. ಇದು ಬಂಡವಾಳಶಾಹಿಗಳಿಗೆ ಅನುಕೂಲ ಮಾಡುವ ಸರಕಾರದ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಭೂಮಿ, ನಮ್ಮ ಹಕ್ಕು ಎಂದು ರೈತರು ಘೋಷಣೆ ಕೂಗಿದರು.

Facebook Comments

Sri Raghav

Admin