ರೈತ ಸಂಘಟನೆಗಳಲ್ಲಿ ಬಿರುಕು, ಪ್ರತಿಭಟನೆಯಿಂದ ಹಿಂದೆ ಸರಿದ ರೈತರು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ ಜ.27 : ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ದಂಗೆಯ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾದ ನಡುವೆಯೇ ಪ್ರತಿಭಟನೆ ನಡೆಸಿದ ರೈತ ಸಂಘಟನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಂದು ನಡೆದ ಮಹತ್ವದ ಸಭೆಯಲ್ಲಿ 2 ರೈತ ಸಂಘಟನೆಗಳು ಪ್ರತಿಭಟನೆಯಿಂದ ಹಿಂದೆ ಸರಿದಿದೆ .

ಭಾರತೀಯ ಕಿಸಾನ್ ಯೂನಿಯನ್ ಭಾರತೀಯ ಕಿಸಾನ್ ಮಜ್ದೂರ್ ಸಂಘ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿದೆ ಎಂದು ರೈತ ಮುಖಂಡ ವಿ ಎಂ ಸಿಂಗ್ ಅವರು ತಿಳಿಸಿದ್ದಾರೆ. ದೆಹಲಿಯ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಧ್ವಜಸ್ಥಂಭದ ಮೇಲೆ ಉದ್ರಿಕ್ತ ರೈತರು ಸಿಖ್ ಧ್ವಜವನ್ನು ಹಾರಿಸಿದ್ದರು. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ರೈತರ ಪ್ರತಿಭಟನೆ ವಿರುದ್ಧ ಆಕ್ರೋಶದ ಕೂಗು ಜಾಗುತ್ತಿದ್ದು ಇದೀಗ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಪ್ರತಿಭಟನೆಯಿಂದ ಹೊರಬರುವುದಾಗಿ ಘೋಷಿಸಿದೆ.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಲು ತಮ್ಮ ಪ್ರತಿಭಟನೆಯ ವಿಧಾನವನ್ನು ತೀವ್ರಗೊಳಿಸಲು ರೈತರು ಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದರು. ಆದರೆ ಅವಧಿಗೆ ಮುನ್ನವೇ ರ್ಯಾಲಿ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ಮುಗಿದು ರಾಜಧಾನಿಯೊಳಗೆ ನುಗ್ಗಿದ್ದರಿಂದ ಪೊಲೀಸರು ಜಲಫಿರಂಗಿ, ಲಾಠಿಚಾರ್ಜ್ ನಡೆಸಿ ರಣರಂಗವಾಗಿ ಮಾರ್ಪಟ್ಟಿತು. ಸಾರ್ವಜನಿಕ ಆಸ್ತಿಪಾಸ್ತಿಗಳು ಕೂಡ ಹಾನಿಯಾಗಿವೆ.

ದೆಹಲಿ ಪೊಲೀಸರು ಇದುವರೆಗೆ ಘಟನೆಗೆ ಸಂಬಂಧಪಟ್ಟಂತೆ 22 ಎಫ್‌ಐಆರ್ ಗಳನ್ನು ದಾಖಲಿಸಿದ್ದು 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ

Facebook Comments

Sri Raghav

Admin