ಕಾಂಚಿಪುರಂನ ಪೆರುಮಾಳ್ ದೇವಸ್ಥಾನದಲ್ಲಿ ಕಾಲ್ತುಳಿತ, ನಾಲ್ವರು ಭಕ್ತರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ,ಜು.19- ತಮಿಳುನಾಡಿನ ಕಾಂಚಿಪುರಂನ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸಾಲುಗಟ್ಟಿ ನಿಂತಿದ್ದ ಭಕ್ತರಲ್ಲಿ ನೂಕುನುಗ್ಗಲು ಮತ್ತು ಕಾಲ್ತುಳಿತ ಉಂಟಾಗಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಭಕ್ತರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.

ದೀರ್ಘಕಾಲ ಸಾಲುಗಟ್ಟಿ ನಿಂತಿದ್ದ ಭಕ್ತರಲ್ಲಿ ಇನ್ನೂ ಅನೇಕರು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಸೇಲಂ ಮೂಲದ ಆನಂದನ್(56), ಆವಡಿ ಮೂಲದ ಜಯಂತಿ(62) ಹಾಗೂ ಆಂಧ್ರ ಪ್ರದೇಶದ ಗುಂಟೂರ್ ಮೂಲದ ನಾರಾಯಣಿ(65) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಭಕ್ತರೂ ಸಹ ಮೃತಪಟ್ಟಿದ್ದಾರೆ.

ಸಾಲುಗಟ್ಟಿದ್ದ ಭಕ್ತರಲ್ಲಿ ಕೆಲವರು ಆಸ್ವಸ್ಥರಾಗಿ ಕುಸಿದು ಬಿದ್ದ ನಂತರ ಅಲ್ಲಿ ಗೊಂದಲ ಉಂಟಾಗಿ ನೂಕುನುಗ್ಗಲು ಮತ್ತು ಕಾಲ್ತುಳಿತ ಉಂಟಾಯಿತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ನಲವತ್ತು ವರ್ಷಗಳಿಂದ ನೀರಿನಲ್ಲಿದ್ದ ಅಥಿ ವರದಾರ್ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.

ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಹೀಗಾಗಿ ನಿನ್ನೆ ರಾತ್ರಿಯಿಂದಲೇ ಭಕ್ತರು ಆಗಮಿಸುತ್ತಿದ್ದು, ಸುಮಾರು 5 ಕಿ.ಮೀ.ವರೆಗೆ ಕ್ಯೂ ಇತ್ತು. ಆದರೆ ದೇವಸ್ಥಾನ ಮಂಡಳಿ ಯಾವುದೇ ಸೂಕ್ತ ಸೌಲಭ್ಯಗಳನ್ನು ನೀಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin