ನಾಲೆಗೆ ಉರುಳಿದ ಕಾರು, ನಾಲ್ವರ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬಾಗಲಕೋಟೆ,ಅ.22-ಅತಿವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ಬದಿ ಕಲ್ಲಿಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿಬಿದ್ದ ಪರಿ ಣಾಮ ನಾಲ್ವರು ಸ್ನೇಹಿತರು ಸಾವನ್ನಪ್ಪಿರುವ ಘಟನೆ ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮಹದೇವಗೌಡ, ಎರಿತಾತಾ, ವಿಜಯ್ ಮತ್ತು ಸುನೀಲ್ ಮೃತಪಟ್ಟ ಸ್ನೇಹಿತರು.

ಆರು ಮಂದಿ ಕಾರಿನಲ್ಲಿ ಜಮಖಂಡಿಯಿಂದ ರಾಮದುರ್ಗ ಕಡೆಗೆ ಪ್ರಯಾಣಿಸುತ್ತಿದ್ದರು. ಲೋಕಾಪುರ ಪಟ್ಟಣದ ಮಾರ್ಗವಾಗಿ ಕಾರು ಹೋಗುತ್ತಿದ್ದಾಗ ರಸ್ತೆ ಬದಿ ಇದ್ದ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಕಾರು ನೀರಿಲ್ಲದ ಘಟಪ್ರಭಾ ಕಾಲುವೆಗೆ ಉರುಳಿ ಬಿದ್ದಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಲೋಕಾಪುರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ನಂತರ ಕ್ರೇನ್ ಮೂಲಕ ಕಾರು ಸಮೇತ ಮೃತ ದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಲೋಕಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments