ಭೀಕರ ಅಪಘಾತದಲ್ಲಿ ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರ ಸಾವು..!
ಹೋಶಾಂಗಾಬಾದ್/ಇಟಾರ್ಸಿ(ಮ.ಪ್ರ.), ಅ.14-ಮಧ್ಯಪ್ರದೇಶದ ಹೋಶಾಂಗಾಬಾದ್ ಮತ್ತು ಇಟಾರ್ಸಿ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ರಾಷ್ಟ್ರೀಯ ಹಾಕಿ ತಂಡದ ನಾಲ್ವರು ಆಟಗಾರರು ದುರಂತ ಸಾವಿಗೀಡಾಗಿದ್ದಾರೆ.
ಈ ದುರ್ಘಟನೆಯಲ್ಲಿ ಇತರ ಮೂವರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಕಿ ಆಟಗಾರರ ತಂಡವು ಧ್ಯಾನ್ ಚಂದ್ ಟ್ರೋಪಿ ಹಾಕಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಹೋಶಾಂಗಾಬಾದ್ನಿಂದ ಇಟಾರ್ಸಿಗೆ ತಮ್ಮ ವಾಹನದಲ್ಲಿ ತೆರಳುತ್ತಿದ್ದಾಗ.
ರಾಷ್ಟ್ರೀಯ ಹೆದ್ದಾರಿ-69ರಲ್ಲಿ ರೈಸಲ್ಪುರ್ ಗ್ರಾಮದ ಬಳಿ ಅಪಘಾತ ಸಂಭವಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿ ಉರುಳಿಬಿದ್ದು ಈ ದುರ್ಘಟನೆ ಸಂಭವಿಸಿತು ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಒಬ್ಬರ ಸ್ಥಿತಿ ಶೋಚನೀಯವಾಗಿದೆ.
Facebook Comments