ಫ್ರೇಜರ್ ಟೌನ್ ಪೊಲೀಸ್ ಠಾಣೆ ಸೀಲ್‍ಡೌನ್‍

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮೇ 22- ಬೆಂಗಳೂರಿನ ಪ್ರೇಜರ್‍ಟೌನ್ ಠಾಣೆಯ ಕಾನ್‍ಸ್ಟೇಬಲ್‍ವೊಬ್ಬರ ಕೊರೊನಾ ವರದಿ ಬಂದ ನಂತರ ಠಾಣೆಯನ್ನು ಸೀಲ್‍ಡೌನ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಎರಡು ಠಾಣೆಗಳನ್ನು ಸೀಲ್‍ಡೌನ್ ಮಾಡಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಕಾನ್‍ಸ್ಟೇಬಲ್ ವರದಿ ಬಂದ ನಂತರ ಪ್ರೇಜರ್‍ಟೌನ್ ಠಾಣೆ ಸೀಲ್‍ಡೌನ್ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಪೆÇಲೀಸ್ ಸಿಬ್ಬಂದಿಗಳಿಗೆ ಕೊರೊನಾ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಹಾಗಿದ್ದರೂ ಕೆಲವರಿಗೆ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಇನ್ನೂ ಹೆಚ್ಚಿನ ಕ್ರಮಗಳನ್ನು ವಹಿಸಲಾಗುವುದು ಎಂದು ತಿಳಿಸಿದರು.

ಪೆÇಲೀಸ್ ಸಿಬ್ಬಂದಿಗೆ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದೇನೆ. 55 ವರ್ಷ ದಾಟಿದವರು ಠಾಣೆಯಲ್ಲೇ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ. ಯುವ ಸಿಬ್ಬಂದಿ ಪಾಳಿಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ ಎಂದರು.

ಕೊರೊನಾ ಸಂದರ್ಭದಲ್ಲಿ ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅದರಲ್ಲೂ ತಬ್ಲಿಘಿಗಳಿಂದ ಕೊರೊನಾ ಹರಡುವುದನ್ನು ನಿಯಂತ್ರಿಸುವಲ್ಲಿ ಪೊಲೀಸರು ಪ್ರಮುಖ ಪಾತ್ರ ವಹಿಸಿದ್ದಾರೆ. ಇಲ್ಲದಿದ್ದರೆ ಕರ್ನಾಟಕವೂ ಪಕ್ಕದ ರಾಜ್ಯದಂತಾಗಿಬಿಡುತ್ತಿತ್ತು ಎಂದು ಬಸವರಾಜು ಬೊಮ್ಮಾಯಿ ತಿಳಿಸಿದರು.

ನಂಜನಗೂಡಿನ ಜುಬಿಲಿಯಂಟ್ ಕಾರ್ಖಾನೆ ಪ್ರಾರಂಭವಾಗಲಿದೆಯೆ ಎಂಬ ಪ್ರಶ್ನೆಗೆ ಕಾರ್ಖಾನೆ ತೆರೆಯಲು ಅನುಮತಿ ನೀಡಿದ್ದೇವೆ. ಅಲ್ಲಿನ ಪರಿಸ್ಥಿತಿ ನೋಡಿಕೊಂಡು ತೆರೆಯುವಂತೆ ಸೂಚಿಸಲಾಗಿದೆ. ಆ ಕಾರ್ಖಾನೆಯನ್ನು ಮುಚ್ಚಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು.

Facebook Comments

Sri Raghav

Admin