BIG NEWS : ಮಧ್ಯಪ್ರದೇಶದಲ್ಲೂ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ ಜಾರಿಗೆ ಗ್ರೀನ್ ಸಿಗ್ನಲ್..!

ಈ ಸುದ್ದಿಯನ್ನು ಶೇರ್ ಮಾಡಿ

ಭೂಪಾಲ್, ಡಿ.26- ಮಧ್ಯಪ್ರದೇಶದಲ್ಲೂ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ ಜಾರಿಗೆ ಗ್ರೀನ್ ಸಿಗ್ನಲ್ ದೊರೆತಿದೆ. ಹೊಸ ಕಾಯ್ದೆಯನ್ವಯ ಬಲವಂತದ ಮತಾಂತರಕ್ಕೆ 10 ವರ್ಷಗಳ ಜೈಲು ವಾಸ ಹಾಗೂ ಒಂದು ಲಕ್ಷ ದಂಡ ವಿಧಿಸಬಹುದಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳಲ್ಲಿ ಕಡಿವಾಣ ಹಾಕುವ ಉದ್ದೇಶದಿಂದ ಹಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲಾಗುತ್ತಿದೆ.

ಮಧ್ಯಪ್ರದೇಶದಲ್ಲೂ ಹೊಸ ಕಾಯ್ದೆ ಅಂಗೀಕಾರಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಂದು ಕೋಮಿನವರು ಮತ್ತೊಂದು ಕೋಮಿನ ಹುಡುಗಿಯನ್ನು ವಿವಾಹವಾಗಿ ಬಲವಂತದ ಮತಾಂತರಕ್ಕೆ ಒತ್ತಾಯಿಸಿದರೆ ಅಂತಹವರಿಗೆ ಹೊಸ ಕಾಯ್ದೆ ಅನ್ವಯ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲು ಅವಕಾಶವಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.

ನಾವು ಜಾರಿಗೆ ತಂದಿರುವ ಹೊಸ ಕಾಯ್ದೆ ಬಲವಂತದ ಮತಾಂತರ ವಿರುದ್ಧದ ಅಸ್ತ್ರವಾಗಿದ್ದು , ಇನ್ನು ಮುಂದೆ ಲವ್ ಜಿಹಾದ್‍ನಂತಹ ಪ್ರಕರಣಗಳು ಕಡಿಮೆಯಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಇದ್ದ 1968ರ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯ ಹೊಸ ರೂಪವಾಗಿ ನೂತನ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.

Facebook Comments