ಫ್ರೀಡಂ ಪಾರ್ಕ್ ಬಳಿ ಖಾಕಿ ಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.8- ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಧರಣಿ ವ್ಯಾಪಕ ಬಿಗಿ ಬಂದೋಬಸ್ತ್ ಮಾಡಲಾಗಿದೆ. ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಮುಷ್ಕರ ನಡೆಸುತ್ತಿದ್ದು, ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಂಡಿರುವ ಧರಣಿ ಹಿನ್ನೆಲೆಯಲ್ಲಿ 11 ಡಿಸಿಪಿ,

23 ಎಸಿಪಿ, 111 ಇನ್ಸ್‍ಪೆಕ್ಟರ್, 316 ಸಬ್‍ಇನ್ಸ್‍ಪೆಕ್ಟರ್, 421 ಸಹಾಯಕ ಸಬ್‍ಇನ್ಸ್‍ಪೆಕ್ಟರ್, ಹೆಡ್‍ಕಾನ್‍ಸ್ಟೇಬಲ್, ಮಹಿಳಾ ಕಾನ್‍ಸ್ಟೇಬಲ್, ಪೊಲೀಸ್ ಕಾನ್‍ಸ್ಟೆಬಲ್‍ಗಳು ಸೇರಿದಂತೆ 4547 ಸಿಬ್ಬಂದಿ, ಕೆಎಸ್‍ಆರ್‍ಪಿ, ಸಿಎಆರ್ 82 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ 2 ಅಗ್ನಿಶಾಮಕ ದಳ, 2 ಆ್ಯಂಬುಲೆನ್ಸ್, 2 ವಾಟರ್ ಜೆಟ್, ಒಂದು ಕ್ಷಿಪ್ರ ಕಾರ್ಯಾಚರಣೆ ಪಡೆ, 4 ಮೀಸಲು ಪಡೆಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.  ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಡಿಫೋ, ಮೆಟ್ರೋ, ರೈಲ್ವೆ ಸ್ಟೇಷನ್‍ಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಸಿಸಿ ಟಿವಿ ಕಣ್ಗಾವಲು ಇಡಲಾಗಿದೆ ಎಂದು ತಿಳಿಸಿದ್ದಾರೆ.

Facebook Comments