ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ್ದಾರೆ.

ಪತ್ರಕರ್ತರು ಮತ್ತು ಅವರ ಕುಟುಂಬಗಳಿಗೆ ಉಚಿತ ಕೋವಿಡ್-19 ಲಸಿಕೆಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಹಲವಾರು ರಾಜ್ಯಗಳಾದ ಮಧ್ಯಪ್ರದೇಶ, ಪಂಜಾಬ್, ತಮಿಳುನಾಡು, ಬಿಹಾರ, ಒಡಿಶಾ ಮತ್ತು ಇತರರು ಪತ್ರಕರ್ತರನ್ನು ಮುಂಚೂಣಿ ಯೋಧರು ಎಂದು ಘೋಷಿಸಿದ್ದಾರೆ ಮತ್ತು ವ್ಯಾಕ್ಸಿನೇಷನ್ ಚಾಲನೆಯಲ್ಲಿ ಆದ್ಯತೆ ನೀಡಲು ನಿರ್ಧರಿಸಿದ್ದಾರೆ

ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ್ದಲ್ಲದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ನಿಯೋಗದಲ್ಲಿ
ಪಬ್ಲಿಕ್ ಟಿವಿ ರವೀಶ್, ಪತ್ರಕರ್ತರಾದ ಯುಎನ್ ಐ ರಾಚಪ್ಪ, ಪ್ರಜಾ ಟಿವಿಯ ಅರುಣ್ ಕುಮಾರ್
ಮತ್ತಿತರರಿದ್ದರು.

# ಅಭಿನಂದನೆ:
ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಈ ಕ್ರಮ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.

Facebook Comments

Sri Raghav

Admin