ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಪರಿಹಾರ ಧನ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.3- ಲಾಕ್‍ಡೌನ್‍ನಿಂದಾಗಿ ಬೆಂಗಳೂರು ನಗರ ಜಿಲ್ಲೆಯ ಹಣ್ಣು ಮತ್ತು ತರಕಾರಿ ಬೆಳೆಗಾರರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಪರಿಹಾರಧನ ಘೋಷಿಸಿದೆ ಎಂದು ನಗರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಕೆ.ಆರ್.ದೇವರಾಜ್ ತಿಳಿಸಿದ್ದಾರೆ.

ಬಾಳೆ, ಪಪ್ಪಾಯ, ದ್ರಾಕ್ಷಿ, ಅಂಜೂರ, ಅನಾನಸ್, ಕಲ್ಲಂಗಡಿ ಮತ್ತು ಕರಬೂಜ ಹಾಗೂ ಟೋಮೋಟೋ, ಹಸಿರು ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಕ್ಯಾರೇಟ್, ಈರುಳ್ಳಿ, ದಪ್ಪಮೆಣಸಿನಕಾಯಿ ಬೆಳೆಗಾರರಿಗೆ ಸರ್ಕಾರದಿಂದ ಪರಿಹಾರಧನ ಘೋಷಿಸ ಲಾಗಿದೆ.

ಫಲಾನುಭವಿಗಳ ಆಯ್ಕೆ ಯನ್ನು 2019-20ನೇ ಸಾಲಿನಲ್ಲಿ ಕೈಗೊಳ್ಳಲಾದ ಹಿಂಗಾರು, ಮುಂಗಾರು ಬೆಳೆ ಸಮೀಕ್ಷೆಯ ವರದಿಯಂತೆ ಆಯ್ಕೆ ಮಾಡಲಾಗುವುದು. ಪ್ರತಿ ಫಲಾನುಭವಿಗೆ ಗರಿಷ್ಠ ಒಂದು ಹೆಕ್ಟೇರ್‍ಗೆ ರೂ.15,000 ಮೀರದಂತೆ ಹಾಗೂ ಕನಿಷ್ಟ 2,000 ಪರಿಹಾರ ಧನ ನೀಡಲಾಗುವುದು. ಮಾರ್ಚ್ ನಾಲ್ಕನೇ ವಾರದ ನಂತರ ನಾಟಿ ಮಾಡಿರುವ ತರಕಾರಿ ಬೆಳೆಗಾರರು ಈ ಯೋಜನೆಯಡಿ ಪರಿಹಾರ ಪಡೆಯಲು ಅರ್ಹರಿರುವುದಿಲ್ಲ.

ಜಿಲ್ಲೆಯ ತೋಟಗಾರಿಕೆ ಹಣ್ಣು ಮತ್ತು ತರಕಾರಿ ಬೆಳೆಗಾರರು ಅಗತ್ಯ ದಾಖಲೆಗಳಾದ ಪಹಣಿ, ಆಧಾರ್ ಕಾರ್ಡ್ , ರೈತರ ಬ್ಯಾಂಕ್ ಖಾತೆಯ ಪಾಸ್ ಬುಕ್ ಜೆರಾಕ್ಸ್ ಗಳೊಂದಿಗೆ ಜೂ.15 ರೊಳಗೆ ಆಯಾ ತಾಲ್ಲೂಕಿನ ತೋಟ ಗಾರಿಕೆ ಇಲಾಖಾ ಕಛೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹು ದಾಗಿದೆ.

ಮಾಹಿತಿಗೆ ಬೆಂಗಳೂರು ನಗರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರ ದೂರವಾಣಿ ಸಂಖ್ಯೆ: 080- 22860640, 9448999213, ಆನೇಕಲ್ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂರವಾಣಿ ಸಂಖ್ಯೆ: 080-27840454, 9448465705, ಬೆಂಗಳೂರು ಉತ್ತರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂರವಾಣಿ ಸಂಖ್ಯೆ: 080-28566740, 9880210892, ಹಾಗೂ ಬೆಂಗಳೂರು ದಕ್ಷಿಣ ಮತ್ತು ಪೂರ್ವ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂರವಾಣಿ ಸಂಖ್ಯೆ: 080-28486144, 7892818107, 9342255556 ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Facebook Comments