ಬಹುಮಹಡಿ ಕಟ್ಟಡ ಬದಲು ಜಿ+3 ಮನೆ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.24- ಇನ್ನು ಮುಂದೆ ಬೆಂಗಳೂರಿನಲ್ಲಿ ಸರ್ಕಾರದ ವತಿಯಿಂದ ಅತಿ ಎತ್ತರದ ಬಹುಮಹಡಿ ಕಟ್ಟಡ ನಿರ್ಮಾಣ ಮಾಡದೆ 53 ಸಾವಿರ ಮನೆಗಳನ್ನು ಜಿ+3 ವಿನ್ಯಾಸದಲ್ಲಿ ನಿರ್ಮಾಣ ಮಾಡುವುದಾಗಿ ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಕೇಳಿದ ಪ್ರಶ್ನೆಗೆ 2017ರಲ್ಲಿ 1 ಲಕ್ಷ ಬಹು ಮಹಡಿ ಬೆಂಗಳೂರು ವಸತಿ ಯೋಜನೆ ಘೋಷಿಸಲು ನಿರ್ಧರಿಸಲಾಯಿತು.

ಕೇಂದ್ರ ಸರ್ಕಾರ ಇದಕ್ಕೆ 600 ಕೋಟಿ ಬಿಡುಗಡೆ ಮಾಡಿದೆ. ಅದರಲ್ಲಿ ಜಿ+14 ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ನಗರ ಯೋಜನೆ ವಿಮಾನಾಭಿವೃದ್ಧಿ ಪ್ರಾಧಿಕಾರ ಜಲ ಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿ ಶಾಮಕ ದಳ ಸೇರಿದಂತೆ ಎಲ್ಲಾ ರೀತಿಯ ಅನುಮತಿಗಳನ್ನು ಪಡೆದುಕೊಳ್ಳಲಾಗಿದೆ.
ಒಂದು ಮನೆಗೆ ಒಂದು ವಾಹನದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಜಾಗದ ಕೊರತೆ ಕಾರಣಕ್ಕಾಗಿ 14 ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತು. ಆದರೆ ಸೂಕ್ತ ಅಲ್ಲ ಎಂಬ ಕಾರಣಕ್ಕಾಗಿ ಮುಂದೆ 53 ಸಾವಿರ ಮನೆಗಳನ್ನು ಜಿ+3 ಮಾದರಿಯಲ್ಲೇ ನಿರ್ಮಿಸಲು ನಿರ್ಧರಿಸಲಾಗಿದೆ. ಈಗಾಗಲೇ 46 ಸಾವಿರ ಮನೆಗಳನ್ನು ಜಿ+14 ವಿನ್ಯಾಸದಲ್ಲಿ ನಿರ್ಮಿಸಲು ಅನುಮತಿ ನೀಡಿರುವುದರಿಂದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ವರ್ಷಗಳ ಕಾಲ ನಿರ್ವಹಣೆಯನ್ನು ಸರ್ಕಾರ ಮಾಡಲಿದೆ. ಶಾಲೆ-ಅಂಗನವಾಡಿ, ಆಸ್ಪತ್ರೆ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯವನ್ನು ಸರ್ಕಾರ ಒದಗಿಸುತ್ತಿದೆ ಎಂದು ಸಚಿವರು ಹೇಳಿದರು.

Facebook Comments