ಜೂಜು : ಡಾರ್ಟ್‍ಗೇಮ್ ಅಡ್ಡೆ ಮೇಲೆ ದಾಳಿ, 16 ಲಕ್ಷ ನಗದು ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.2- ಸಿಸಿಬಿ ಪೊಲೀಸರು ಜೂಜು ಅಡ್ಡೆ, ಕ್ರಿಕೆಟ್ ಬೆಟ್ಟಿಂಗ್, ಡಾರ್ಟ್‍ಗೇಮ್ ಅಡ್ಡಗಳ ಮೇಲೆ ದಾಳಿ ನಡೆಸಿ 152 ಮಂದಿ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿಕೊಂಡು 16 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದು 5 ಲಕ್ಷ ರೂ. ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ದೇವನಹಳ್ಳಿ ಠಾಣೆ ವ್ಯಾಪ್ತಿಯ ಕ್ಲಬ್‍ಲ್ಲಿ ಸದಸ್ಯರಲ್ಲದ ವ್ಯಕ್ತಿಗಳನ್ನು ಹೊರ ರಾಜ್ಯದ ನೂರಾರು ಮಂದಿಯನ್ನು ಸೇರಿಸಿಕೊಂಡು ಅಂದರ್-ಬಾಹರ್ ಅದೃಷ್ಟದ ಜೂಜಾಟ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ 117 ಮಂದಿಯನ್ನು ವಶಕ್ಕೆ ಪಡೆದು 10.21 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೆಡ್‍ವೊಂದರಲ್ಲಿ ಡಾರ್ಟ್‍ಗೇಮ್ ನಡೆಸುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಜೂಜಾಟದಲ್ಲಿ ತೊಡಗಿದ್ದ 7 ಮಂದಿಯನ್ನು ವಶಕ್ಕೆ ಪಡೆದು 21,500 ರೂ. ವಶಪಡಿಸಿಕೊಂಡಿದ್ದು, ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿಸಿಬಿ ವಿಶೇಷ ವಿಚಾರಣಾ ದಳದ ಎಸಿಪಿ ಎನ್.ಹನುಮಂತರಾಯ ಅವರ ನೇತೃತ್ವದಲ್ಲಿ ಇನ್ಸೆಪೆಕ್ಟರ್ ಮತ್ತು ಸಿಬ್ಬಂದಿ ಈ ಕಾರ್ಯಾರಣೆ ನಡೆಸಿದ್ದಾರೆ.

Facebook Comments