ಗಣೇಶಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳು

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ಸೆ.11- ಪ್ರತಿಷ್ಠಾಪನೆ ಮಾಡಲಾಗಿದ್ದ ಗಣೇಶ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಚಳ್ಳಕೆರೆ ತಾಲ್ಲುಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ 14 ವರ್ಷಗಳಿಂದ ಗ್ರಾಮದಲ್ಲಿ ಯುವಕರ ತಂಡ ಗಣೇಶ ಮೂರ್ತಿಯನ್ನು ಶಾಂತಿ-ಸೌಹಾರ್ದಯುತವಾಗಿ ಪ್ರತಿಷ್ಠಾಪಿಸುತ್ತಿದ್ದರು. ಅದರಂತೆ ಈ ಬಾರಿಯೂ ಕೊರೊನಾ ಸಂಕಷ್ಟದ ನಡುವೆಯೂ ಯುವಕರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು.

ಕಳೆದ ರಾತ್ರಿ ಪೂಜೆ-ಪುನಸ್ಕಾರ ಮಾಡಿದ್ದು, ತಡರಾತ್ರಿ ಕಿಡಿಗೇಡಿಗಳು ಗಣೇಶಮೂರ್ತಿಯನ್ನು ಧ್ವಂಸ ಮಾಡಿದ್ದು, ಅಲಂಕಾರವನ್ನೆಲ್ಲ ನಾಶ ಮಾಡಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದ್ದು, ಗ್ರಾಮಕ್ಕೆ ಏನಾದರೂ ಕೇಡಾಗಬಹುದೆಂಬ ಚಿಂತೆಯಲ್ಲಿದ್ದಾರೆ.

ಕೂಡಲೇ ಗಣೇಶಮೂರ್ತಿಯನ್ನು ನಾಶ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಥಳುಕು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments