33 ಗಾರ್ಮೆಟ್ಸ್ ನೌಕರರು, ಅನಾಥಾಶ್ರಮದ 27 ಮಕ್ಕಳಿಗೆ ಕೊರೊನಾ..!

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ, ಏ.4- ಇಲ್ಲಿನ ಶಾಹಿ ಗಾರ್ಮೆಂಟ್ಸ್‍ನ 33 ಮಂದಿ ನೌಕರರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಾಲ್ಲೂಕಿನ ಬೆತ್ತನಿ ಬಳಿಯ ಶಾಹಿ ಗಾರ್ಮೆಂಟ್ಸ್‍ನಲ್ಲಿ 900 ನೌಕರರು ಕೆಲಸ ನಿರ್ವಹಿಸುತ್ತಿದ್ದು, ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಿದಾಗ 33 ಮಂದಿ ನೌಕರರಿಗೆ ಸೋಂಕು ತಗುಲಿರುವುದು ಕಂಡು ಬಂದಿದೆ. ಎಲ್ಲಾ ಕೊರೊನಾ ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಮಾಹಿತಿ ನೀಡಿದ್ದಾರೆ.

ಅನಾಥಾಶ್ರಮದ 27 ಮಕ್ಕಳಿಗೆ ಕೊರೊನಾ:ಬಂಗಾರಪೇಟೆ ತಾಲ್ಲೂಕಿನ ಅತ್ತಿಗಿರಿ ಕುಪ್ಪದಲ್ಲಿರುವ ಅನಾಥಾಶ್ರಮದಲ್ಲಿ 27 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಒಬ್ಬ ವಿದ್ಯಾರ್ಥಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.

ಈ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಮಕ್ಕಳನ್ನು ಕೋಲಾರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಅಧಿಕಾರಿಗಳು ಅನಾಥಾಶ್ರಮವನ್ನು ಕಂಟೈನ್ಮೆಂಟ್ ಜೋನ್ ಮಾಡಿದ್ದಾರೆ.

Facebook Comments