ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಗೌರವ್ ಗುಪ್ತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.11-ಬಿಬಿಎಂಪಿಯ ಆದಾಯ ಮೂಲಗಳನ್ನು ಬಲಿಷ್ಠಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವುದಾಗಿ ನೂತನ ಆಡಳಿತಾಧಿಕಾರಿ ಗೌರವ್ ಗುಪ್ತ ಹೇಳಿದರು.

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಬಿಂಪಿಯಲ್ಲಿ ತೆರಿಗೆ ಕಡಿಮೆಯಾಗಿದೆ.

ಆದಾಯದ ಮೂಲಗಳನ್ನು ಬಲಿಷ್ಠಗೊಳಿಸಬೇಕು. ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಆದಾಯ ಹೆಚ್ಚಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಕೋವಿಡ್ 19 ಕಡಿಮೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇನ್ನು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತೇವೆ. ನಗರದಲ್ಲಿ ಕಸದ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವೆ. ವಾಸ್ತವಿಕ ಬಜೆಟ್ ಮಂಡನೆಗೆ ಹೆಚ್ಚು ಒತ್ತು ನೀಡುವೆ ಎಂದು ಹೇಳಿದರು.

ಸರ್ಕಾರ ನನ್ನನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ. ಆಯುಕ್ತರು ಸೇರಿದಂತೆ ಅಧಿಕಾರಿಗಳ ಸಲಹೆ ಪಡೆದು ಕಾರ್ಯ ನಿರ್ವಹಿಸುತ್ತೇನೆ. ಸುಧಾರಣೆ ಕ್ರಮಗಳಿಗೆ ಅಗತ್ಯಬಿದ್ದರೆ ಮಾಜಿ ಜನಪ್ರತಿನಿಧಿಗಳ ಸಲಹೆಯನ್ನೂ ಕೂಡ ಪಡೆಯುತ್ತೇನೆ ಎಂದರು.

Facebook Comments