Saturday, April 20, 2024
Homeರಾಜ್ಯಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನ

ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನ

ಬೆಂಗಳೂರು,ಫೆ.14- ಇತಿಹಾಸ ಪ್ರಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಅಭಿವೃದ್ದಿ ಪ್ರಾಧಿಕಾರವನ್ನು ರಚನೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನಪರಿಷತ್‍ನಲ್ಲಿ ಪ್ರಕಟಿಸಿದರು. ಸದಸ್ಯ ಕಾಂಗ್ರೆಸ್‍ನ ಎಸ್.ರವಿ ಅವರ ಪರವಾಗಿ ಯು.ಬಿ.ವೆಂಕಟೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಘಾಟಿ ಸುಬ್ರಮಣ್ಯ ಅಭಿವೃದ್ದಿ ಪ್ರಾಧಿಕಾರವನ್ನು ಘೋಷಣೆ ಮಾಡುತ್ತೇವೆ.

ಈಗಾಗಲೇ ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಸಂಪುಟದಲ್ಲಿ ಅನುಮೋದನೆ ನೀಡುವುದಷ್ಟೇ ಬಾಕಿ ಇದೆ ಎಂದು ತಿಳಿಸಿದರು. ಪ್ರಾಧಿಕಾರ ರಚನೆಯಾದರೆ ಇದರಲ್ಲಿ ಮುಖ್ಯಮಂತ್ರಿ, ಸಚಿವರು, ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು, ಐಎಎಸ್, ಕೆಎಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ವೃಂದದ ಅಧಿಕಾರಿಗಳು ಬರುತ್ತಾರೆ. ಈ ವ್ಯಾಪ್ತಿಯಡಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು.

ಪಾಕ್ ಪ್ರಧಾನಿಯಾಗಲಿದ್ದಾರೆ ಶೆಹಬಾಜ್ ಷರೀಪ್

ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಪ್ರತಿ ವರ್ಷ ಕರ್ನಾಟಕದ ವಿವಿಧ ಭಾಗಗಳಿಂದ 60-70 ಲಕ್ಷ ಭಕ್ತರು ಆಗಮಿಸುತ್ತಾರೆ. ಪ್ರತಿ ವರ್ಷ ದೇವಸ್ಥಾನಕ್ಕೆ 8 ಕೋಟಿ ಆದಾಯ ಬರುತ್ತದೆ. ಇಲ್ಲಿ ರಸ್ತೆ ಅಗಲೀಕರಣ, ಶೌಚಾಲಯಗಳು, ವಸತಿ ಸೇರಿದಂತೆ ವಿವಿಧ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಅಗತ್ಯವಿದೆ. ಪ್ರಾಧಿಕಾರ ರಚನೆಯಾದರೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ. ಘಾಟಿ ಸುಬ್ರಮಣ್ಯದಲ್ಲಿ ಭಕ್ತರಿಗೆ ಅನೇಕ ಸಮಸ್ಯೆಗಳು ಎದುರಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಹಿಂದೆ ಪದ್ಮ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿದ್ದವು : ಉಪ ರಾಷ್ಟ್ರಪತಿ

ಮೊದಲ ಆದ್ಯತೆಯಾಗಿ ಸರತಿ ಸಾಲಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ವಾಹನ ನಿಲ್ದಾಣ, ವಸತಿ ಗೃಹಗಳು, ಶೌಚಾಲಯ, ಮುಡಿ ಭವನ, ದಾಸೋಹ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ. ಘಾಟಿ ಸುಬ್ರಹ್ಮಣ್ಯ ಮಾತ್ರವಲ್ಲದೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಯಾತ್ರಾ ಸ್ಥಳಗಳಲ್ಲಿ ಮೂಲಸೌಕರ್ಯ ಕಲ್ಪಿಸಿಕೊಡಬೇಕೆಂಬ ಬೇಡಿಕೆ ಬರುತ್ತಲೇ ಇದೆ. ಸವದತ್ತಿ ಎಲ್ಲಮ್ಮ ಸೇರಿದಂತೆ ಅನೇಕ ಕಡೆ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಆರ್ಥಿಕ ಇತಿಮಿತಿಯೊಳಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

RELATED ARTICLES

Latest News