ಪದೇ ಪದೇ ಕಂಪನದಿಂದ ನಡುಗುತ್ತಿದೆ ದೆಹಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಡಿ.2-ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ. ಇಂದು ಮುಂಜಾನೆ ಘಾಜಿಯಬಾದ್‍ನಲ್ಲಿ ಲಘು ಭೂಕಂಪನವಾಗಿದೆ ಎಂದು ಭೂಗರ್ಭ ಇಲಾಖೆ ಅಧಿಕಾರಿಗಳು ತಿಳಿಸಿದ್ಧಾರೆ. ಘಾಜಿಯಾಬಾದ್‍ನಿಂದ ಐದು ಕಿ.ಮೀ.ದೂರದಲ್ಲಿ ಕೇಂದ್ರಿಕೃತವಾಗಿದ್ದ ಭೂಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ 2.7ರಷ್ಟು ದಾಖಲಾಗಿತ್ತು.

ಕಳೆದ ಏಪ್ರಿಲ್‍ನಿಂದ ಇಲ್ಲಿಯವರೆಗೆ ದೆಹಲಿ ಸುತ್ತಮುತ್ತಲ ಪ್ರದೇಶಗಳಲ್ಲಿ 15 ಬಾರಿ ಭೂಮಿ ಕಂಪಿಸಿದ ಅನುಭವವಾಗಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಇಂದು ಮುಂಜಾನೆ ಸಂಭವಿಸಿದ ಕಂಪನದಿಂದ ಯಾವುದೆ ಪ್ರಾಣಹಾನಿ ಹಾಗೂ ಆಸ್ತಿಪಾಸ್ತಿ ನಷ್ಟವಾದ ಬಗ್ಗೆ ವರದಿಯಾಗಿಲ್ಲ. ದೆಹಲಿ ಸುತ್ತಮುತ್ತ ಪದೇ ಪದೇ ಭೂಮಿ ಕಂಪಿಸುತ್ತಿರುವ ಬಗ್ಗೆ ವಿಜ್ಞಾನಿಗಳು ಸಂಶೋಧನೆ ಆರಂಭಿಸಿದ್ದಾರೆ

Facebook Comments