ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಗುಲಾಂ ನಬಿ ಆಜಾದ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಡಿ.2- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು ಬಯಸುತ್ತೇನೆ. ಆದರೆ ಆ ಪರಿಸ್ಥಿತಿ ಕಾಣುತ್ತಿಲ್ಲ ಎಂದಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 370 ವಿ ರದ್ದುಗೊಳಿಸಿದ್ದು ದೊಡ್ಡ ರಾಜಕೀಯ ಹುನ್ನಾರ. ಈ ಬಗ್ಗೆ ನಾನು ಸಂಸತ್‍ನಲ್ಲಿ ಮಾತನಾಡಿದ್ದೆ. ಸದ್ಯಕ್ಕೆ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದರು.

ಕಾಂಗ್ರೆಸ್‍ನಲ್ಲಿ ಅತ್ಯನ್ನತ ನಾಯಕರಾಗಿದ್ದ ಗುಲಾಂ ನಬಿ ಆಜಾದ್ ಅವರು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದರು. ನಿವೃತ್ತಿಯ ಬಳಿಕ ಪಕ್ಷಕ್ಕೆ ಮುಜುಗರವಾಗುವಂತಹ ಹಲವಾರು ಹೇಳಿಕೆಗಳನ್ನು ನೀಡಿ ಗುಲಾಂ ನಬಿ ಆಜಾದ್ ಗಮನ ಸೆಳೆದಿದ್ದಾರೆ.

Facebook Comments