ನಿಧಿಗಾಗಿ ಬಾಲಕಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ,ಡಿ.13- ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿ ಜಿಲ್ಲೆಯ ಅಫ್ಜಲ್‍ಪುರ ತಾಲೂಕಿನ ಹಾವನೂರು ಹೊರವಲಯದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದು ನಿಧಿಗಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಶ್ವೇತ (6) ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾ ಗಿದ್ದು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ನಿಧಿ ತೆಗೆಯಲು ಈ ಬಾಲಕಿಯನ್ನು ಬಲಿ ಕೊಡಲಾಗಿದೆ ಎಂದು ಬಲವಾದ ಶಂಕೆ ವ್ಯಕ್ತವಾಗಿದೆ. ಈ ಆಯಾಮದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Facebook Comments