ರೇಪ್ ಕ್ಯಾಪಿಟಲ್ ಯುಪಿಯಲ್ಲಿ ಮತ್ತೊಬ್ಬ ದಲಿತ ಯುವತಿಯ ರೇಪ್ ಅಂಡ್ ಮರ್ಡರ್..!

ಈ ಸುದ್ದಿಯನ್ನು ಶೇರ್ ಮಾಡಿ

ಬಾರಾಬಂಕಿ, ಅ.16-ಉತ್ತರ ಪ್ರದೇಶ ರೇಪ್ ಕ್ಯಾಪಿಟಲ್ ಎಂಬ ಕುಖ್ಯಾತಿಗೆ ಪುಷ್ಠಿ ನೀಡುವಂತೆ ಮತ್ತೊಂದು ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿದೆ. ಬಾರಾಬಂಕಿ ಜಿಲ್ಲೆಯಲ್ಲಿ 18 ವರ್ಷದ ದಲಿತ ಯುವತಿಯನ್ನು ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಕೊಂದಿರುವ ಘಟನೆ ಜರುಗಿದೆ.

ಉತ್ತರ ಪ್ರದೇಶದ ಹತ್ರಾಸ್ ಮತ್ತು ಬಲರಾಂಪುರ್‍ದಲ್ಲಿ ದಲಿತ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಬೆನ್ನಲ್ಲೆ ಇಂಥ ಪ್ರಕರಣಗಳು ಮರುಕಳಿಸುತ್ತಲೇ ಇವೆ.

ಬಾರಾಬಂಕಿ ಜಿಲ್ಲೆಯ ಸತ್ರಿಕ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲವೊಂದರಲ್ಲಿ ಈ ಘಟನೆ ನಡೆದಿದ್ದು, ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಕೊಂದಿರುವುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಎಸ್. ಗೌತಮ್ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೊನ್ನೆಯಷ್ಟೇ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ದಲಿತ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Facebook Comments

Sri Raghav

Admin