ಮೈಸೂರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸೋದರಮಾವನಿಂದಲೇ ಅತ್ಯಾಚಾರ
ಈ ಸುದ್ದಿಯನ್ನು ಶೇರ್ ಮಾಡಿ
ಮೈಸೂರು, ಜೂ.13- ಅಪ್ರಾಪ್ತ ಬಾಲಕಿ ಮೇಲೆ ಸೋದರಮಾವನೇ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸರಸ್ವತಿಪುರಂ ನಿವಾಸಿ ರಮೇಶ್ (23) ಎಂಬಾತ ತನ್ನ 17 ವರ್ಷದ ಅಕ್ಕನ ಮಗಳ ಮೇಲೆ ಅತ್ಯಾಚಾರ ವೆಸಗಿ ತಲೆಮರೆಸಿಕೊಂಡಿದ್ದಾನೆ. ಬಾಲಕಿಯನ್ನು ಕಾಲೇಜಿಗೆ ಡ್ರಾಪ್ ಮಾಡುವುದಾಗಿ ಸೋಮವಾರ ಕರೆದುಕೊಂಡು ಹೋದ ಈತ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ನಂತರ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಪೋಷಕರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
Facebook Comments