ಮದುವೆ ಅಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಫೇಸ್‍ಬುಕ್ ಫ್ರೇಂಡ್‍ ಅತ್ಯಾಚಾರ..!

ಈ ಸುದ್ದಿಯನ್ನು ಶೇರ್ ಮಾಡಿ

ಬಲಿಯಾ,ಅ.14-ಸಾಮಾಜಿಕ ಜಾಲತಾಣದಲ್ಲಿ ಪರಿಚಿತಳಾದ 16 ವರ್ಷದ ಅಪ್ರಾಪ್ತ ಬಾಲಕಿಗೆ ಮದುವೆ ಅಗುವುದಾಗಿ ನಂಬಿಸಿ ಯುವಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಲಿಯಾ ಜಿಲ್ಲೆಯ ದೊಕಾಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

ಹರ್ದೋಯಿ ಜಿಲ್ಲೆಯ 31 ವರ್ಷದ ಯುವಕ ಫೇಸ್‍ಬುಕ್‍ನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ನಿನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಆತನ ಮಾತು ನಂಬಿ ಕಳೆದ ಆ.25 ರಂದು ಬಾಲಕಿ ಆತನ ಬಳಿಗೆ ತೆರಳಿದ್ದಾಗ ಆತ ಪುಸಲಾಯಿಸಿ ಅತ್ಯಚಾರ ನಡೆಸಿ ಅಪ್ರಾಪ್ತೆಯೊಂದಿಗೆ ತಲೆಮರೆಸಿಕೊಂಡಿದ್ದ.

ತನ್ನ ಮಗಳ ನಾಪತ್ತೆ ಕುರಿತಂತೆ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಚರಣೆಗಿಳಿದ ದೊಕಾಟಿ ಪೊಲೀಸರು ಬೈರಿಯಾ ಬಸ್ ನಿಲ್ದಾಣದಲ್ಲಿ ಅಪ್ರಾಪ್ತೆಯೊಂದಿಗೆ ಇದ್ದ ವ್ಯಕ್ತಿಯನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಗುರಿಯಾಗಿರುವ ವ್ಯಕ್ತಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Facebook Comments