ಕಟ್ಟಡದ 3ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.23- ಮನೆಯ ಮೂರನೆ ಮಹಡಿಯಿಂದ ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಅಕ್ಕಿಪೇಟೆಯ ಎನ್‍ಎಂ ಲೇನ್ ನಿವಾಸಿ ಡಿಂಪಿಲ್ ಕುಮಾರಿ (16) ಮೃತಪಟ್ಟ ಬಾಲಕಿ.

ಮೂರನೆ ಮಹಡಿಯಲ್ಲಿ ಡಿಂಪಿಲ್ ಕುಮಾರಿ ಅವರ ಮನೆ ಇದ್ದು, ರಾತ್ರಿ 9.30ರ ಸುಮಾರಿನಲ್ಲಿ ಊಟ ಮಾಡಿ ಹೊರಗೆ ಬಂದಾಗ ಮಹಡಿಯಿಂದ ಬಿದ್ದು ತೀವ್ರ ಗಾಯಗೊಂಡಿದ್ದಾಳೆ. ಗಂಭೀರ ಗಾಯಗೊಂಡಿದ್ದ ಡಿಂಪಿಲ್ ಕುಮಾರಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ ಎಂದು ಕಾಟನ್‍ಪೇಟೆ ಠಾಣೆಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ಸುದ್ದಿ ತಿಳಿದ ಕಾಟನ್‍ಪೇಟೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾಳೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿಡಲಾಗಿದೆ.

Facebook Comments