ವಿಶ್ವವ್ಯಾಪಿ 5 ಲಕ್ಷ ಸನಿಹಕ್ಕೆ ಕೊರೋನಾ ಸಾವಿನ ಸಂಖ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.25 ಗಂಡಾಂತರಕಾರಿ ಕೊರೊನಾ ವೈರಸ್ ದಾಳಿಯಿಂದ ಇಡೀ ವಿಶ್ವವೇ ಭಯಭೀತವಾಗಿದ್ದು, ಒಟ್ಟು ಸಾವಿನ ಸಂಖ್ಯೆ ಐದು ಲಕ್ಷ ಲಕ್ಷ ಹಾಗೂ ಸೋಂಕಿತರ ಸಂಖ್ಯೆ 95.33 ಲಕ್ಷ ಸನಿಹದಲ್ಲಿದೆ.  ಇದರ ನಡುವೆಯೂ ವಿಶ್ವದಲ್ಲಿ ಸುಮಾರು 51.80 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ.

ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರ ಜಗತ್ತಿನಾದ್ಯಂತ ಈವರೆಗೆ 4,85,122 ಮಂದಿ ಸಾವಿಗೀಡಾಗಿದ್ದು, 95,32,128 ಸೋಂಕು ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 38.68 ಲಕ್ಷ ದಾಟಿದೆ. ಅಲ್ಲದೇ ಇನ್ನೂ 58,000ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಆತಂಕವಿದೆ.

ನಾಳೆ ವೇಳೆಗೆ ಸಾವಿನ ಸಂಖ್ಯೆ 4.93 ಲಕ್ಷ ಮತ್ತು ಸಾಂಕ್ರಾಮಿಕ ರೋಗಿಗಳ ಪ್ರಮಾಣ 98 ಲಕ್ಷ ದಾಟುವ ಆತಂಕವಿದೆ. ಇನ್ನೆರಡು ದಿನಗಳಲ್ಲಿ ವಿಶ್ವಾದ್ಯಂತ ಸಾವಿನ ಸಂಖ್ಯೆ 5 ಲಕ್ಷ ಮತ್ತು ಸೋಂಕಿತರ ಸಂಖ್ಯೆ 1 ಕೋಟಿ ದಾಟುವ ಆತಂಕವಿದೆ.  ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿದೆ.

ವಿಶ್ವದಲ್ಲಿ ಈವರೆಗೆ 51,77,011 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಗುಣಮುಖರಾಗಿದ್ದಾರೆ. ಅಮೆರಿಕ, ಬ್ರೆಜಿಲ್, ರಷ್ಯಾ, ಭಾರತ ಮತ್ತು ಇಂಗ್ಲೆಂಡ್ ಕೊರೊನಾ ಕೇಸ್‍ಗಳಲ್ಲಿ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ.

Facebook Comments