ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿದ ಗೋವಾ ಕನ್ನಡಿಗರ ದುಸ್ಥಿತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ: 20- ಗೋವಾದಲ್ಲಿ ಕನ್ನಡಿಗರನ್ನು ಒಕ್ಕಲೆಬ್ಬಿಸುತ್ತಿರುವ ಅಲ್ಲಿನ ಸರಕಾರದ ಕ್ರಮ ವಿಧಾನ ಪರಿಷತ್ ನಲ್ಲಿಂದು ಪ್ರತಿಧನಿಸಿ ಅಡಳಿತ ಮತ್ತು ಪ್ರತಿ ಪಕ್ಷದ ನಡುವೆ ಭಾರಿ ಮಾತಿನ ಚಕಮಕಿ ನಡೆದು ಗದ್ದಲದ ವಾತಾವರಣ ನಿರ್ಮಾಣವಾಗಿ ಪ್ರತಿಪಕ್ಷದವರು ಸಭಾ ತ್ಯಾಗ ನಡೆಸಿದ ಪ್ರಸಂಗ ನಡೆಯಿತು.

ಜೆಡಿಎಸ್ ನ ಬಸವರಾಜ್ ಹೊರಟ್ಟಿ ಪ್ರಸ್ತಾಪಿಸಿದ ವಿಷಯಕ್ಕೆ ಕನ್ನಡ ಸಂಸ್ಕøತಿ ಸಚಿವ ಸಿ.ಟಿ. ರವಿ ಅವರು ಕನ್ನಡಿಗರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.  ಗಾಗಲೇ ಅಲ್ಲಿನ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿದ್ದೇವೆ. ಯಾವುದೇ ಕಾರಣಕ್ಕೂ ಕನ್ನಡಿಗರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆದರೆ ಸಚಿವರ ಉತ್ತರದಿಂದ ತೃಪ್ತರಾಗದ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಸರ್ಕಾರದ ವಿರುದ್ಧ „ಕ್ಕಾರದ ಘೋಷಣೆ ಕೂಗಿದರು. ಕಲಾಪ ಸಹಜ ಸ್ಥಿತಿಗೆ ಬಾರದ ಕಾರಣ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಕಲಾಪವನ್ನು ಕೆಲ ಕಾಲ ಮುಂದೂಡಿದರು.

Facebook Comments