ಗೋಕಾಕ್ ಫಾಲ್ಸ್‌ನಲ್ಲಿ ನಗರಸಭೆ ಜ್ಯೂನಿಯರ್ ಎಂಜಿನಿಯರ್ ಶವ ಪತ್ತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಗೋಕಾಕ್, ಜು.4-ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ನಗರಸಭೆ ಜ್ಯೂನಿಯರ್ ಎಂಜಿನಿಯರ್ ಸಂಜೀವ ಗಿಡದಹುಬ್ಬಳ್ಳಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಗೋಕಾಕ್ ಪಾಲ್ಸ್‍ನಲ್ಲಿ ಅವರ ಶವ ಪತ್ತೆಯಾಗಿದ್ದು, ಇದು ಕೊಲೆಯೋ, ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದು ತಿಳಿದುಬಂದಿಲ್ಲ.

ಗೋಕಾಕ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತನಿಖೆ ನಂತರ ಸತ್ಯಾಂಶ ಹೊರಬರಬೇಕಿದೆ. ಎರಡು ದಿನಗಳ ಹಿಂದಷ್ಟೇ ಇವರು ನಾಪತ್ತೆಯಾಗಿದ್ದರು. ಇವರ ಶವ ಈಗ ಗೋಕಾಕ್ ಫಾಲ್ಸ್‍ನಲ್ಲಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ತನಿಖೆ ನಂತರ ಸಾವಿಗೆ ಕಾರಣ ತಿಳಿದುಬರಲಿದೆ.

Facebook Comments