ದುಬೈನಿಂದ ಮಿಕ್ಸಿಯಲ್ಲಿಟ್ಟುಕೊಂಡು ಚಿನ್ನ ತಂದು ಸಿಕ್ಕಾಕೊಂಡ..!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು, ಮೇ 16-ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ 34 ಲಕ್ಷ ರೂ. ಮೌಲ್ಯದ 1 ಕೆಜೆ 52 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ಧಾರೆ.

ದುಬೈನಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬ ಮಿಕ್ಸಿಯಲ್ಲಿ ಚಿನ್ನವನ್ನು ಅಡಗಿಸಿಟ್ಟಿದ್ದ. ಸೀಮಾ ಸುಂಕ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿದಾಗ ಇದು ಪತ್ತೆಯಾಯಿತು.

ಪ್ರಯಾಣಿಕನನ್ನು ನಂತರ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದ್ಧಾರೆ.  ಸುಮಾರು 34 ಲಕ್ಷ ರೂ. ಮೌಲ್ಯದ 1.52 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅರಬ್ ದೇಶಗಳಿಂದ ಭಾರತಕ್ಕೆ ಚಿನ್ನವನ್ನು ಕಳ್ಳಸಾಗಣೆ ಮಾಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಪ್ರಮುಖ ಏರ್‍ಪೆಫೋಟ್‍ಗಳಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣಗಳು ಪತ್ತೆಯಾಗಿದ್ದು, ಅಮೂಲ್ಯ ಲೋಹವನ್ನು ವಶಪಡಿಸಿಕೊಳ್ಳಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ