ಒಳ ಉಡುಪಿನಲ್ಲಿ ಚಿನ್ನ ಅಡಗಿಸಿಟ್ಟಿದ್ದ ಇಬ್ಬರು ಪ್ರಯಾಣಿಕರು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 14- ಒಳ ಉಡುಪು ಮತ್ತು ಸೋಂಟದ ಭಾಗದಲ್ಲಿ ಚಿನ್ನವನ್ನು ಅಡಗಿಸಿಟ್ಟು ದುಬೈನಿಂದ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, 1.44 ಕೋಟಿ ರೂಪಾಯಿ ಮೌಲ್ಯದ 2 ಕೆಜಿ 843 ಗ್ರಾಂ ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.

ದುಬೈನಿಂದ ಇಕೆ-568 ವಿಮಾನದಲ್ಲಿ ಪ್ರಯಾಣಿಸುತ್ತಿರುವ ವ್ಯಕ್ತಿಗಳು ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಡಿಆರ್‍ಐ ಖಚಿತ ಮಾಹಿತಿ ಆಧರಿಸಿ ತಪಾಸಣೆ ನಡೆಸಿದಾಗ ಇಬ್ಬರು ಪ್ರಯಾಣಿಕರು ಸಿಕ್ಕಿ ಬಿದಿದ್ದಾರೆ.

ಸೋಂಟದ ಭಾಗದಲ್ಲಿ ಹಾಗೂ ಒಳುಡುಪಿನಲ್ಲಿ ಗಟ್ಟಿ ಗಂಜಿ ರೂಪದ ಚಿನ್ನವನ್ನು ಅಡಗಿಸಿಡಲಾಗಿತ್ತು. ಚಿನ್ನವನ್ನು ಜಪ್ತಿ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Facebook Comments