ಗೂಡ್ಸ್ ವಾಹನ ಪಲ್ಟಿ: ಇಬ್ಬರು ಕೂಲಿ ಕಾರ್ಮಿಕರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮಾ.22-ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನವೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಯಶವಂತಪುರದ ಹಿಡಿಯಾಳ ಬಳಿ ನಡೆದಿದೆ. ಯಶವಂತಪುರ ಗ್ರಾಮದ ಆದಿವಾಸಿ ದೇವಯ್ಯ(45), ಕೂಸಮ್ಮ(40) ಮೃತಪಟ್ಟ ಕೂಲಿ ಕಾರ್ಮಿಕರು.

ಇಂದು ಬೆಳಗ್ಗೆ ಗೂಡ್ಸ್‍ವಾಹನವೊಂದರಲ್ಲಿ 30ಕ್ಕೂ ಹೆಚ್ಚು ಕೂಲಿ ಕಾರ್ಮಿಕರನ್ನು ಶುಂಠಿ ಕೆಲಸಕ್ಕೆಂದು ಕರೆದೊಯ್ಯುವಾಗ ಗೂಡ್ಸ್ ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಕೂಲಿಕಾರ್ಮಿರಾದ ದೇವಯ್ಯ, ಕೂಸಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಹನ ಚಾಲಕ ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಎಚ್.ಡಿ.ಕೋಟೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments